Cyber Security
ಓ ನನ್ನ ಚೇತನ,
ಆಗು ನೀ ಅನಿಕೇತನ!
ರೂಪರೂಪಗಳನು ದಾಟಿ,
ನಾಮಕೋಟಿಗಳನು ಮೀಟಿ,
ಎದೆಯ ಬಿರಿಯೆ ಭಾವದೀಟಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!
ನೂರು ಮತದ ಹೊಟ್ಟ ತೂರಿ,
ಎಲ್ಲ ತತ್ತ್ವದೆಲ್ಲೆ ಮೀರಿ,
ನಿರ್ದಿಗಂತವಾಗಿ ಏರಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!
ಎಲ್ಲಿಯೂ ನಿಲ್ಲದಿರು;
ಮನೆಯನೆಂದೂ ಕಟ್ಟದಿರು;
ಕೊನೆಯನೆಂದೂ ಮುಟ್ಟದಿರು;
ಓ ಅನಂತವಾಗಿರು!
ಓ ನನ್ನ ಚೇತನ,
ಆಗು ನೀ ಅನಿಕೇತನ!
ಅನಂತ ತಾನ್ ಅನಂತವಾಗಿ
ಆಗುತಿಹನೆ ನಿತ್ಯಯೋಗಿ;
ಅನಂತ ನೀ ಅನಂತವಾಗು;
ಆಗು, ಆಗು, ಆಗು, ಆಗು,
ಓ ನನ್ನ ಚೇತನ,
ಆಗು ನೀ ಅನಿಕೇತನ!
-ಕುವೆಂಪು
ಗುಡಿ ಚರ್ಚು ಮಸಜೀದಿಗಳ ಬಿಟ್ಟು ಹೊರಬನ್ನಿ
ಬಡತನವ ಬುಡಮಟ್ಟ ಕೀಳಬನ್ನಿ
ಮೌಢ್ಯತೆಯ ಮಾರಿಯನು ಹೊರದೂಡಲೈತನ್ನಿ
ವಿಜ್ಞಾನ ದೀವಿಗೆಯ ಹಿಡಿಯ ಬನ್ನಿ
ಓ, ಬನ್ನಿ, ಸೋದರರೆ, ಬೇಗ ಬನ್ನಿ.
ಸಿಲುಕದಿರಿ ಮತವೆಂಬ ಮೋಹದಜ್ಞಾನಕ್ಕೆ;
ಮತಿಯಿಂದ ದುಡಿಯಿರೈ ಲೋಕಹಿತಕೆ.
ಆ ಮತದ ಈ ಮತದ ಹಳೆಮತದ ಸಹವಾಸ
ಸಾಕಿನ್ನು ಸೇರಿರೈ ಮನುಜ ಮತಕೆ.
ಓ, ಬನ್ನಿ ಸೋದರರೆ ವಿಶ್ವಪಥಕೆ
-ಕುವೆಂಪು
ಯಾವ ಕಾಲದ ಶಾಸ್ತ್ರವೇನು ಹೇಳಿದರೇನು ?
ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು ?
-ಕುವೆಂಪು
ಮನುಷ್ಯ ಜಾತಿ ತಾನೊಂದೆ ವಲಂ
-ಪಂಪ (ವಿಕ್ರಮಾರ್ಜುನ ವಿಜಯ)
ಅರಿವಂ ಪೊಸಯಿಸುವುದು ಧರ್ಮಂ
-ಪಂಪ (ಆದಿ ಪುರಾಣ)
ಏನಾದರೂ ಆಗು ಮೊದಲು ಮಾನವನಾಗು
-ಸಿದ್ದಯ್ಯ ಪುರಾಣಿಕ
"ಕೊಂದು ಉಳಿಸಿಕೊಳ್ಳಬೇಕಾದ ಧರ್ಮ ಯಾವುದಾದರೂ ಇದೆಯಾ ಈ ಪ್ರಪಂಚದಲ್ಲಿ?"
-ಕೆ ಪಿ ಪೂರ್ಣಚಂದ್ರ ತೇಜಸ್ವಿ
if the data has not been changed, no new rows will appear.
Day | Followers | Gain | % Gain |
---|---|---|---|
June 24, 2024 | 2,016 | +36 | +1.9% |
May 22, 2024 | 1,980 | +34 | +1.8% |
April 19, 2024 | 1,946 | +27 | +1.5% |
March 13, 2024 | 1,919 | +15 | +0.8% |
February 20, 2024 | 1,904 | +27 | +1.5% |
February 03, 2024 | 1,877 | +23 | +1.3% |
January 17, 2024 | 1,854 | +25 | +1.4% |
December 31, 2023 | 1,829 | +529 | +40.7% |
March 09, 2022 | 1,300 | +100 | +8.4% |
January 19, 2022 | 1,200 | +100 | +9.1% |