|| ಓಂ ಶ್ರೀ ಗುರು ಬಸವ ಲಿಂಗಾಯ ನಮಃ||
ಉಳುವವರು ಇಲ್ಲದಿದ್ದರೆ ಉಳಿಯುವುದೆಲ್ಲಿ!?
*ಶರಣ ಸರ್ಪಭೂಷಣ ಶಿವಯೋಗಿಗಳ
ಕೈವಲ್ಯ ಗೀತೆ*
ಬಿಡು ಬಾಹ್ಯದೊಳು ಡಂಭವ
ಮಾನಸದೊಳು ಎಡೆಬಿಡದಿರು ಶಂಭುವ.
ಮನದೊಳು ವಂಚಿಸಿ ಹೊರಗೆ ನೀ ಕೀರ್ತಿಯ
ಪಡೆದರೆ ಶಿವ ನಿನಗೊಲಿಯನು ಮರುಳೆ.
ಜನಕಂಜಿ ನಡೆಕೊಂಡರೇನುಂಟು ಲೋಕದಿ
ಮನಕಂಜಿ ನಡೆಕೊಂಬುದೇ ಚಂದ.
ಜನರೇನ ಬಲ್ಲರು ಒಳಗಾಗೋ ಕೃತ್ಯವ
ಮನವರಿಯದ ಕಳ್ಳತನವಿಲ್ಲವಲ್ಲ.
ಮನದಲಿ ಶಿವ ತಾ ಮನೆಮಾಡಿಕೊಂಡಿಹ
ಮನಮೆಚ್ಚಿ ನಡೆದರೆ ಶಿವ ತಾ ಮೆಚ್ಚುವ.
ಮನಕಂಜಿ ನಡೆಯದೆ ಜನಕಂಜಿ ನಡೆದರೆ
ಮನದಾಣ್ಮ ಗುರುಸಿದ್ಧ ಮರೆಯಾಗೋನಲ್ಲ.
*ವಿಶ್ವಗುರು ಬಸವಣ್ಣನವರ ವಚನ*
ಕೃಷಿ ಕೃತ್ಯ ಕಾಯಕ ಮಾಡುವ ಸದ್ಭಕ್ತನ ಪಾದಗಳ ತೋರಿಸಿ ಬದುಕಿಸಯ್ಯ ಆತನ ತನು ಶುದ್ಧ, ಆತನ ಮನ ಶುದ್ಧ, ಆತನ ಭಾವ ಶುದ್ಧ. ಆತನ ಮನೆಯಲ್ಲಿ ಹೊಕ್ಕು ಲಿಂಗಾರ್ಚನೆ ಮಾಡಿದ ಗುರು ಪಾವನ ನೋಡಾ ಕೂಡಲಸಂಗಮದೇವಾ.
*ವ್ಯೋಮಕಾಯಸಿದ್ಧ ಜಗದ್ಗುರು ಅಲ್ಲಮಪ್ರಭುದೇವರ ವಚನ*
ಗುರುವೆಂದರಿಯರು, ಹಿರಿಯರೆಂದರಿಯರು;
ದೇವರೆಂದರಿಯರು, ಭಕ್ತರೆಂದರಿಯರು.
ಲಿಂಗವೆಂದರಿಯರು, ಜಂಗಮವೆಂದರಿಯರು;
ಬಂದ ಬರವನರಿಯರು ನಿಂದ ನಿಲವನರಿಯರು.
ಶಿವಶರಣರ ನೋಯಿಸುವ ಪಾತಕರನೇನೆಂಬೆ ?
ಗುಹೇಶ್ವರಾ, ನಿಮ್ಮ ಮನ ನೊಂದ ನೋವು ಬರಿದೆ ಹೋಗದು.
(ಸಮಗ್ರ ವಚನ ಸಂಪುಟ: 2 ವಚನದ ಸಂಖ್ಯೆ: 1171)
*ಜಕ್ಕಣಯ್ಯ ಶರಣರ ವಚನ*
ನಿಂದಕರು ನಿಂದಿಸಿದರೆ ಸ್ವಯಜ್ಞಾನಿ ಅಂಜುವನೇನಯ್ಯ ?
ಆ ನಿಂದಕನ ಅಂತರಂಗದಲ್ಲಿ ಅಹಂಕಾರನೆಂಬ ಕೋಣ ಹುಟ್ಟಿ,
ಜ್ಞಾನಿಗಳೆಂದರಿಯದೆ, ಬಾಯಿಗೆ ಬಂದಂತೆ ನುಡಿವ ತರಕಿಮೂಳರ
ಎನಗೊಮ್ಮೆ ತೋರದಿರಯ್ಯ ಝೇಂಕಾರ ನಿಜಲಿಂಗಪ್ರಭುವೆ.
(ಸಮಗ್ರ ವಚನ ಸಂಪುಟ:10 ವಚನದ ಸಂಖ್ಯೆ:1276)
*ವ್ಯೋಮಕಾಯಸಿದ್ಧ ಜಗದ್ಗುರು ಅಲ್ಲಮಪ್ರಭುದೇವರ ವಚನ*
ತಾಯಿಗಾದ ಸುಖದುಃಖಂಗಳು ಬಸಿರ ಶಿಶುವಿಂಗೆ ನೋಡಯ್ಯಾ.
ಶಿವಶರಣರಿಗೆ ಮಾಡಿದ ಸುಖದುಃಖಗಳು ಶಿವನ ತಾಗುವುವು.
ಕರಣವುಳ್ಳವರು ಮರಣವಿಲ್ಲದವಂಗೆ ಮುಳಿದಡೆ
ತನುವುಳ್ಳವರ ಮುಟ್ಟುವುದಲ್ಲದೆ, ಒಡಲಿಲ್ಲದಾತನ ಮುಟ್ಟಬಲ್ಲುದೆ ?
ಗುಹೇಶ್ವರಾ ಕೆಂಡವ ಒರಲೆ ಮುಟ್ಟಬಲ್ಲುದೆ ?
(ಸಮಗ್ರ ವಚನ ಸಂಪುಟ:2 ವಚನದ ಸಂಖ್ಯೆ:1248)
*ತೋಂಟದ ಸಿದ್ಧಲಿಂಗ ಶಿವಯೋಗಿಗಳ ವಚನ*
ಕಂಡೊಂದ ನುಡಿವುದೀ ಲೋಕ.
ಕಾಣದೊಂದ ನುಡಿವುದೀ ಲೋಕ.
ಹಿಂದೆ ನಿಂದಿಸಿದರೆಂದು ಕುಂದಲಿಲ್ಲ.
ಮುಂದೆ ವಂದಿಸಿದರೆಂದುಬ್ಬಲಿಲ್ಲ.
ವಂದನೆ ನಿಂದನೆಯೆಂಬುದು ಉಪಜೀವಿಗಳಿಗಲ್ಲದೆ,
ಉಪಮಾತೀತನಾದ ಪ್ರಾಣಲಿಂಗೈಕ್ಯನಿಗುಂಟೇ?
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
(ಸಮಗ್ರ ವಚನ ಸಂಪುಟ: 11 ವಚನದ ಸಂಖ್ಯೆ: 671)
*ವಿಶ್ವಗುರು ಬಸವಣ್ಣನವರ ವಚನ*
ನಾಳೆ ಬಪ್ಪುದು ನಮಗಿಂದೆ ಬರಲಿ,
ಇಂದು ಬಪ್ಪುದು ನಮಗೀಗಲೆ ಬರಲಿ,
ಇದಕಾರಂಜುವರು, ಇದಕಾರಳುಕುವರು
`ಜಾತಸ್ಯ ಮರಣಂ ಧ್ರುವಂ' ಎಂದುದಾಗಿ
ನಮ್ಮ ಕೂಡಲಸಂಗಮದೇವರು ಬರೆದ ಬರೆಹವ ತಪ್ಪಿಸುವಡೆ
ಹರಿಬ್ರಹ್ಮಾದಿಗಳಿಗಳವಲ್ಲ.
(ಸಮಗ್ರ ವಚನ ಸಂಪುಟ: 1 ವಚನದ ಸಂಖ್ಯೆ: 697)
if the data has not been changed, no new rows will appear.
Day | Followers | Gain | % Gain |
---|---|---|---|
May 20, 2024 | 780 | +218 | +38.8% |
July 04, 2023 | 562 | +4 | +0.8% |
February 01, 2023 | 558 | -15 | -2.7% |
September 30, 2022 | 573 | +89 | +18.4% |
August 09, 2022 | 484 | +16 | +3.5% |
July 03, 2022 | 468 | +8 | +1.8% |
May 27, 2022 | 460 | +44 | +10.6% |
April 19, 2022 | 416 | +30 | +7.8% |
March 11, 2022 | 386 | +17 | +4.7% |
January 13, 2022 | 369 | +3 | +0.9% |