ಜಮದಗ್ನಿಯು ಈಗ ನಡೆಯುತ್ತಿರುವ ವೈವಸ್ವತ ಮನ್ವಂತರದ ಸಪ್ತರ್ಷಿಗಳಲ್ಲಿ ಒಬ್ಬ. ರೇಣುಕಾದೇವಿ ಈತನ ಪತ್ನಿ. ಈತನಿಗೆ ಐದು ಜನ ಮಕ್ಕಳಿದ್ದರು. ವಿಷ್ಣುವಿನ ಅವತಾರವಾದ ಪರಶುರಾಮ ಈತನ ಕೊನೆಯ ಮಗ
ಮಹಾಭಾರತದ (ವನಪರ್ವ) ಪ್ರಕಾರ, ಒಂದು ದಿನ ರೇಣುಕೆ ನದೀಸ್ನಾನಕ್ಕಾಗಿ ಹೋದಳು. ಅಲ್ಲಿ ಚಿತ್ರರಥನೆಂಬ ಗಂಧರ್ವ ಜಲಕ್ರೀಡೆಯಾಡುತ್ತಿದ್ದುದನ್ನು ನೋಡಿ ಮೋಹವಶಳಾದಳು. (ಚಿತ್ರರಥ ತನ್ನ ಪ್ರೇಯಸಿಯರೊಡನೆ ಜಲಕ್ರೀಡೆಯಾಡುತ್ತ ರಮಿಸುತ್ತಿದ್ದನೆಂದೂ ಪಾಠಾಂತರವಿದೆ). ಇದರಿಂದ ಆಕೆ ಹಿಂದಿರುಗುವುದು ತಡವಾಯಿತು. ಮೊದಲೇ ಕೋಪದ ಅಪರಾವತಾರದಂತಿದ್ದ ಜಮದಗ್ನಿ ಸಂಶಯಗೊಂಡು ಶಿರಚ್ಛೇದನ ಮಾಡಲು ತನ್ನ ಮೊದಲ ನಾಲ್ವರು ಮಕ್ಕಳಿಗೆ ಅಜ್ಞಾಪಿಸಿದ. ಅವರಾರೂ ಅದಕ್ಕೆ ಒಪ್ಪಲಿಲ್ಲ. ಕಡೆಯ ಮಗ ಪರಶುರಾಮ ಮರುಮಾತಾಡದೆ ಹಿಂದು ಮುಂದು ನೋಡದೆ ತನ್ನ ಕೊಡಲಿಯಿಂದ ತಾಯಿಯ ತಲೆಯನ್ನು ಕತ್ತರಿಸಿಬಿಟ್ಟ. ಮಗನ ಸದ್ಯಃಪಿತೃವಾಕ್ಯಪರಿಪಾಲನಾ ಬುದ್ಧಿಯನ್ನು ಕಂಡು ಸಂತೃಪ್ತನಾದ ಜಮದಗ್ನಿ ವರವೊಂದನ್ನು ಕೇಳಿಕೊಳ್ಳಲು ಹೇಳಲು ಆತ ತನ್ನ ಪ್ರಿಯಮಾತೆಯನ್ನು ಮತ್ತೆ ಬದುಕಿಸಬೇಕೆಂದೂ ಇನ್ನು ಮುಂದೆ ಇಂಥ ಉಗ್ರಕೋಪ ಪ್ರದರ್ಶನವನ್ನು ಬಿಟ್ಟುಬಿಡಬೇಕೆಂದೂ ಬೇಡಿಕೊಂಡ. ರೇಣುಕಾ ಮಾತೆ ಬದುಕಿದಳು.
if the data has not been changed, no new rows will appear.
Day | Followers | Gain | % Gain |
---|---|---|---|
December 06, 2023 | 161 | +15 | +10.3% |
July 16, 2022 | 146 | +1 | +0.7% |
March 25, 2022 | 145 | +12 | +9.1% |
January 26, 2022 | 133 | +1 | +0.8% |
December 20, 2021 | 132 | +2 | +1.6% |