ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಬಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ. ಇದೇ ಅಂತರಂಗಶುದ್ಧಿ, ಇದೇ ಬಹಿರಂಗಶುದ್ಧಿ ಇದೇ ನಮ್ಮ ಕೂಡಲಸಂಗಮದೇವರನೊಲಿಸುವ ಪರಿ